Ad Widget .

ಉಗ್ರರ ಅಟ್ಟಹಾಸಕ್ಕೆ ಇಬ್ಬರು ನಾಗರಿಕರು ಬಲಿ | ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್’ನಲ್ಲಿ ಇಂದು ಉಗ್ರರ ದಾಳಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸೊಪೋರ್’ನ ಅರಂಪೋರಾ ಪ್ರದೇಶದಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಪರಿಣಾಮ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿ, ಮತ್ತಿಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ಆರಂಭಿಸಿವೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *