ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಯ ಕುರಿತಂತೆ ಇದೇ ಮಾ.27 ಅಥವಾ 28ರಂದು ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಚುನಾವಣಾ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ವಿಧಾನಸಭೆಗೆ ಯಾವುದೇ ಕ್ಷಣಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಮಾರ್ಚ್ 27 ಅಥವಾ 28ರಂದು ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆದಿದ್ದಾರೆ.
ಈ ಬಗ್ಗೆ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಜಂಟಿ ಮುಖ್ಯ ಚುನಾವಣಾಧಿಕಾರಿ ಟಿ.ಯೋಗೇಶ್, ಕರ್ನಾಟಕ ವಿಧಾನಸಭಾ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಲಿದೆ. ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವೇಳಾಪಟ್ಟಿಯನ್ನು ಘೋಷಿಸಬಹುದು ಎಂದು ತಿಳಿಸಿದ್ದಾರೆ.
ಚುನಾವಣೆ ಘೋಷಣೆಗೂ ಮುನ್ನವೇ ಹಲವು ಕಾರ್ಯಗಳನ್ನು ನಿರ್ವಹಿಸಬೇಕಿದೆ. ಮಾದರಿ ಚುನಾವಣಾ ನೀತಿ ಸಂಹಿತೆಯಂತೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ.