Ad Widget .

ಪುತ್ತೂರು ಬಸ್ ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಸಮಗ್ರ ನ್ಯೂಸ್: ‘ತುಳುನಾಡಿನ ಅವಳಿ ವೀರರಾದ ಕೋಟಿ- ಚೆನ್ನಯರ ಹೆಸರನ್ನು ಪುತ್ತೂರಿನ ಬಸ್‌ ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸವನ್ನು ಸರ್ಕಾರ ಮಾಡಿದೆ’ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್‌ ನಿಲ್ದಾಣಕ್ಕೆ ಭಾನುವಾರ ‘ಕೋಟಿ ಚೆನ್ನಯ ಬಸ್‌ ನಿಲ್ದಾಣ’ ನಾಮಕರಣ ಸಮಾರಂಭದಲ್ಲಿ ನಾಮಫಲಕವನ್ನು ಅನಾವರಣಗೊಳಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Ad Widget . Ad Widget . Ad Widget .

‘ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಹಿಂದೂ ಧರ್ಮದ ಎಲ್ಲರ ಆರಾಧಕರು. ಸರ್ಕಾರವು ಕೋಟಿ ಚೆನ್ನಯರ ಆರಾಧಕರ ಜೊತೆಗಿದೆ ಎಂಬುದಕ್ಕೆ ಕೋಟಿ ಚೆನ್ನಯ ನಾಮಕರಣ ಪೂರಕವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿ ಜೊತೆಗೆ ಚರ್ಚೆ ನಡೆಸಲಾಗುವುದು. ಕೋಟಿ ಚೆನ್ನಯರ 264 ಗರಡಿಗಳಿಗೂ ಜಾಗ ಮಂಜೂರು ಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಲಾಗುವುದು’ ಎಂದು ತಿಳಿಸಿದರು.

Leave a Comment

Your email address will not be published. Required fields are marked *