Samagra news: ಪಾನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು ಇದುವರೆಗೆ ಇದೇ ಮಾರ್ಚ್ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಇದೀಗ ಈ ದಿನಾಂಕವನ್ನು ಜೂನ್ 30, 2023ರ ವರೆಗೆ ವಿಸ್ತರಿಸಲಾಗಿದೆ.
ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ವ್ಯಕ್ತಿಗಳು ತಮ್ಮ ಶಾಶ್ವತ ಖಾತೆ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಆಧಾರ್‌ನೊಂದಿಗೆ ಲಿಂಕ್ ಮಾಡದ ಪಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಮೊದಲು ಇದೇ ಮಾರ್ಚ್ 31ಕ್ಕೆ ಡೆಡ್ ಲೈನ್ ನೀಡಲಾಗಿದ್ದು, ಅಷ್ಟರೊಳಗೆ ಎಲ್ಲರೂ ತಮ್ಮ ಪಾನ್ ನಂಬರ್ ಅನ್ನು ಆಧಾರ್ ನಂಬರ್ ಗೆ ಲಿಂಕ್ ಮಾಡಿಸಬೇಕು ಎಂದು ಸರ್ಕಾರ ತಿಳಿಸಿತ್ತು. ಇದೀಗ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಕಡೇ ದಿನಾಂಕವನ್ನು ವಿಸ್ತರಿಸಲಾಗಿದೆ ಅಂತಾ ಗಾಳಿ ಸುದ್ದಿ ಹಬ್ಬಿತ್ತು. ಆದರೀಗ ಅಧಿಕೃತವಾಗಿ ಕೊನೆ ದಿನಾಂಕವನ್ನು ಜೂನ್ 30ಕ್ಕೆ ವಿಸ್ತರಿಸಲಾಗಿದೆ. ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಪಾನ್ ನಂಬರ್ ಗೆ ಆಧಾರ್ ನಂಬರ್ ಲಿಂಕ್ ಮಾಡಿ. ಹೆಚ್ಚಿನ ಮಾಹಿತಿಗಾಗಿ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ.