ಸಮಗ್ರ ನ್ಯೂಸ್: ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು ಪ್ರಕರಣಗಳನ್ನು ಬೇದಿಸುವಲ್ಲಿ ಯಶಸ್ವಿಯಾಗಿದ್ದರು.
ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಅವರನ್ನು ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ.