Ad Widget .

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ

ಸಮಗ್ರ ನ್ಯೂಸ್: ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಪಟ್ಟುಹಿಡಿದಿದ್ದಾರೆ.

Ad Widget . Ad Widget .

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

Ad Widget . Ad Widget .

‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ‌ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

Leave a Comment

Your email address will not be published. Required fields are marked *