Ad Widget .

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Ad Widget . Ad Widget . Ad Widget .

ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಯಾವುದೇ ಗೊಂದಲ, ಆತಂಕಗಳಿದ್ದರೆ ಪರಿಹರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿ ಆರಂಭಿಸಿದ್ದು, 080-23310075/76ಕ್ಕೆ ಕರೆ ಮಾಡಬಹುದಾಗಿದೆ.

Leave a Comment

Your email address will not be published. Required fields are marked *