ಸಮಗ್ರ ನ್ಯೂಸ್: ಬೆಂಗಳೂರು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಲರ್ಟ್ ಆಗಿದೆ. ಇದೀಗ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ವಿನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ ನಡೆಯಲಿದೆ.
ಇಂದು ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಹಾಗೂ ಮುಖಂಡರು ಓಟಿಂಗ್ ಮೂಲಕ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದ್ದಾರೆ. ನಾಳೆ ನಾಡಿದ್ದು ಎರಡು ದಿನ ಎಲ್ಲ ಜಿಲ್ಲಾ ಘಟಕಗಳ ಕೋರ್ ಕಮಿಟಿಗಳ ಸದಸ್ಯರು ಬೆಂಗಳೂರಿಗೆ ಆಗಮಿಸಿ ರಾಜ್ಯ ಘಟಕದ ಪ್ರಮುಖರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಅಭ್ಯರ್ಥಿಗಳ ಕುರಿತು ತಮ್ಮ ಅಭಿಪ್ರಾಯ ದಾಖಲಿಸಲಿದ್ದಾರೆ.
ನಂತರ ಏ.3 ಅಥವಾ 4ರಂದು ರಾಜ್ಯ ಕೋರ್ ಕಮಿಟಿ ಸಭೆ ನಡೆದು ಅಭ್ಯರ್ಥಿಗಳ ಬಗ್ಗೆ ಅಂತಿಮವಾಗಿ ನಿರ್ಧರಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರಗಳ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಆ ಕ್ಷೇತ್ರದಿಂದ ಜಿಲ್ಲಾ ಘಟಕಗಳಿಗೆ ನೇಮಕಗೊಂಡವರು ಅಭ್ಯರ್ಥಿಗಳ ಆಯ್ಕೆಗೆ ಮತ ಚಲಾಯಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಲರ್ಟ್ ಆಗಿದೆ. ಇದೀಗ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ವಿನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ಬಿಜೆಪಿಯಿಂದ ಆಂತರಿಕ ಚುನಾವಣೆ ನಡೆಯಲಿದೆ.