ಸಮಗ್ರ ನ್ಯೂಸ್: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ರೆನೀಶ್ (27 ) ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.
ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.