Samagra news : ಸುಳ್ಯದಲ್ಲಿ ಜನಪ್ರಿಯ ವೈದ್ಯರಾಗಿದ್ದ ಗುರುತಿಸಿಕೊಂಡಿದ್ದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು 30 ವರ್ಷಗಳ ಸರಕಾರಿ ಸೇವೆಯಿಂದ ಮಾ.31ರಂದು ಸ್ವಯಂ ನಿವೃತ್ತಿ ಪಡೆದಿದ್ದಾರೆ.
ಇವರ 6 ವರ್ಷಗಳ ಸೇವಾ ಅವಧಿ ಉಳಿದಿರುವಂತೆಯೇ ಸ್ವಯಂ ನಿವೃತ್ತಿ ಪಡೆದಿದ್ದಾರೆ. 1993ರಲ್ಲಿ ವೈದ್ಯರಾಗಿ ಸರಕಾರಿ ಸೇವೆಗೆ ಸೇರಿದ್ದ ಡಾ.ಹಿಮಕರ ಅವರು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ ಕೆಎಂಸಿಯಲ್ಲಿ ವೈದ್ಯಕೀಯ ಪಿಜಿ ಪಡೆದರು. ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದರು.ಆ ನಂತರ ಸುಳ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಎರಡು ವರ್ಷಗಳ ಹಿಂದೆ ಅವರು ಸ್ವಯಂ ನಿವೃತ್ತಿ ಬಯಸಿ ಅರ್ಜಿ ಸಲ್ಲಿಸಿದ್ದರು. ಇದೀಗ ಸರಕಾರ ಅವರಿಗೆ ಸ್ವಯಂ ನಿವೃತ್ತಿ ನೀಡಿದೆ. ಖ್ಯಾತ ಹಾಗು ಜನಪ್ರಿಯ ವೈದ್ಯರಾಗಿ ಗುರುತಿಸಿಕೊಂಡಿದ್ದ ಹಿಮಕರ್ ಅವರು ಸರಕಾರಿ ಆಸ್ಪತ್ರೆಯಲ್ಲಿ ಅತೀ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.
ಇನ್ನೂ ಸರಕಾರಿ ಸೇವೆಯಿಂದ ನಿವೃತ್ತರಾದರೂ ಸುಳ್ಯ ತನ್ನ ಖಾಸಗೀ ಕ್ಲೀನಿಕ್ನಲ್ಲಿ ಜನರ ಸೇವೆಗೆ ಲಭ್ಯರಿರುತ್ತೇನೆ ಎಂದು ಡಾ.ಹಿಮಕರ ಅವರು ಹೇಳಿದ್ದಾರೆ.