ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಏ.11ರವರೆಗೂ ಕಾಲಾವಕಾಶ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಯುವಜನರು ಪ್ರಜಾಪ್ರಭುತ್ವದ ಶಿಲ್ಪಿಗಳಾಗುತ್ತಾರೆ. ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಕನಸು ಕಟ್ಟಿ ಅದರ ಹಿಂದೆ ಬೆನ್ನಟ್ಟುವ ಯುವಜನರಿಗೆ ಪ್ರಜಾಪ್ರಭುತ್ವವು ಬೆಂಬಲವಾಗಬೇಕಾದರೆ ಪ್ರತಿಯೊಬ್ಬರು ಮತದಾನ ಮಾಡಬೇಕಾಗುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಲು ಇಂದೇ ಮತದಾರರ ಪಟ್ಟಿಯಲ್ಲಿ ನೊಂದಣಿಯಾಗುವುದು ಅತ್ಯಾವಶ್ಯಕವಾಗಿರುತ್ತದೆ.

Ad Widget ... ..

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಭಾರತೀಯ ಪ್ರಜೆ 18 ವರ್ಷ ದಾಟಿದರೆ ಮತದಾನ ಮಾಡಲು ಅರ್ಹ. 2004ರಲ್ಲಿ ಜನಿಸಿದ ಪ್ರತಿಯೊಬ್ಬರೂ 2023ರ ಏಪ್ರಿಲ್ 1 ಕ್ಕೆ 18 ವರ್ಷ ಪೂರ್ಣಗೊಳಿಸಿದವರೂ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

Ad Widget

18 ವರ್ಷ ಪೂರ್ಣಗೊಳಿಸಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ವೋಟರ್ ಹೆಲ್ಪ್ಲೈನ್ ಆಯಪ್ ಮೂಲಕ ಆನ್ಲೈನ್ ನೋಂದಣಿ ಕೈಗೊಳ್ಳಬಹುದು.

ಯುವಜನರು ತಮ್ಮ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರವನ್ನು ಸಹ ಸಂಪರ್ಕಿಸಬಹುದಾಗಿದೆ. ಇಲ್ಲವಾದಲ್ಲಿ ಸಹಾಯವಾಣಿ 1950 ಸಂಖ್ಯೆಗೆ ಸಂಪರ್ಕಿಸಬಹುದು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏ.11ರ ಮಂಗಳವಾರ ಕೊನೆದಿನವಾಗಿದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಚುನಾವಣಾ ಗುರುತಿನ ಚೀಟಿ ಪಡೆದು ಸಧೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ತಮ್ಮ ಹಕ್ಕು ಚಲಾಯಿಸಬೇಕು.

Leave a Comment

Your email address will not be published. Required fields are marked *