ಸಮಗ್ರ ನ್ಯೂಸ್: ಕಳೆದ ತಿಂಗಳಷ್ಟೇ ಆಂದ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪ ಸಂಭವಿಸಿದ್ದು, ಭೂಕಂಪನದಿಂದ ಎನ್ ಟಿಆರ್ ಮತ್ತು ಪಲ್ನಾಡು ಜಿಲ್ಲೆಯ ನಿವಾಸಿಗಳು ಭಯದಿಂದ ತತ್ತರಿಸಿದ್ದಾರೆ. ಇತ್ತೀಚೆಗಷ್ಟೇ ತಿರುಪತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಭೀತಿಯಿಂದ ಜನರು ಮನೆ ಬಿಟ್ಟು ಹೊರಗೆ ಓಡಿ ಬಂದಿದ್ದರು.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ದೋರವರಿಸತ್ರ ಸೇರಿ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಏಕಾಏಕಿ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದ ಸಾಮಾನುಗಳು ಕೆಳಗೆ ಬಿದ್ದಿವೆ. ಇನ್ನು ಜನರು ಭಯಭೀತರಾಗಿ ತತ್ತರಿಸಿದ್ದು, ಜನರು ಮನೆಯಿಂದ ಹೊರಬಂದು ಬೀದಿಗೆ ಓಡಿದರು. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆ ಇನ್ನೂ ತಿಳಿದುಬಂದಿಲ್ಲ.
ಆದರೆ, ಇದುವರೆಗೂ ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟವಾಗಿಲ್ಲದ ಕಾರಣ ಅಧಿಕಾರಿಗಳು ನಿರಾಳರಾಗಿದ್ದಾರೆ. ಫೆಬ್ರವರಿಯಲ್ಲಿ, ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಳಯವನ್ನು ಸೃಷ್ಟಿಸಿತು.







