ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.
ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಇಲ್ಲಿದೆ…










