Ad Widget .

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

Ad Widget . Ad Widget . Ad Widget .

ಶುಕ್ರವಾರ ಸಂಜೆ ವೇಳೆಗೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.

ರಾಯಚೂರಿನ ಗಬ್ಬೂರು, ವಿಜಯಪುರ, ಆಲಮಟ್ಟಿ, ಚಿಕ್ಕ ಮಗಳೂರು, ಬೀದರ್‌ನ ಹುಮನಾ ಬಾದ್‌, ಕಲಬುರಗಿಯ ಖಜೂರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಧಾರವಾಡದ ಕುಂದಗೊಳ, ಯಾದಗಿರಿಯ ಕೆಂಬಾವಿ, ಚಿಕ್ಕಮಗಳೂರಿನ ಎನ್‌.ಆರ್‌.ಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Leave a Comment

Your email address will not be published. Required fields are marked *