Ad Widget .

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

Ad Widget . Ad Widget .

ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

Ad Widget . Ad Widget .

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯು ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿರುವ ಹಿನ್ನೆಲೆ ಪಟ್ಟಿ ಬಿಡುಗಡೆ ತಡವಾಗುತ್ತಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮೊದಲ ಪಟ್ಟಿಯಲ್ಲಿ ಕೆಲವು ಹಾಲಿ ಶಾಸಕರಿಗೆ ಕೋಕ್ ನೀಡಲಿದ್ದು, ಅಂಥ ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಕಣಕ್ಕಿಳಿಸಲು ಪಕ್ಷವು ತೀರ್ಮಾನಿಸಿದೆ. ಆಡಳಿತ ವಿರೋ ಅಲೆ ಹಾಗೂ ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ, ವಯಸ್ಸು, ಗಂಭೀರ ಆರೋಪಗಳನ್ನು ಎದುರಿಸುತ್ತಿರುವರಿಗೆ ಟಿಕೆಟ್ ಕೈ ತಪ್ಪಿಸಿ ಅಂತಹ ಕಡೆ ಪಕ್ಷ ನಿಷ್ಠರು, ಕ್ಷೇತ್ರದಲ್ಲಿ ಮತದಾರರ ಜೊತೆ ಉತ್ತಮ ಸಂಪರ್ಕ ಹೊಂದಿರುವವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

Leave a Comment

Your email address will not be published. Required fields are marked *