ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು

ಸಮಗ್ರ ನ್ಯೂಸ್: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್, ಮುಂದಿನ ಎರಡು ದಿನ ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪಮಾನ ಹೆಚ್ಚಳವಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ.

Ad Widget

ಕಲಬುರಗಿಯಲ್ಲಿ ಕಳೆದ ವಾರ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮತ್ತೆ ಮಳೆ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ ಇಳಿಕೆ ಆಗಿತ್ತು. ಸೋಮವಾರ 40.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *