ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ.

Ad Widget ... ..

ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Ad Widget

ಅತ್ತ ಕಾಂಗ್ರೆಸ್ ಟಿಕೆಟ್‍ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದ್ದ ಅವರು, ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದ್ದರಿಂದ ಬೇಸರಗೊಂಡಿದ್ದರು. ಈ ಹಿನ್ನಲೆಯಲ್ಲೇ ಎಂಎಲ್ಸಿ ಸ್ಥಾನಕ್ಕೆ ಆರ್ ಶಂಕರ್ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಆರ್ ಶಂಕರ್ ಅವರು ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರರಾಗಿ ಅದೀಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *