ಸಮಗ್ರ ನ್ಯೂಸ್: ಮಡಿಕೇರಿಯ ಹಿರಿಯ ವಕೀಲ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ ಎಂಬವರ ಮೇಲೆ ಕಳೆದ ರಾತ್ರಿ ಗುಂಡಿನ ದಾಳಿ ನಡೆದಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಚೆಟ್ಟಲ್ಲಿ ಹತ್ತಿರದ ಅಭ್ಯಾಲ ಬಳಿ ಕೃಷ್ಣಮೂರ್ತಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಕೃಷ್ಣಮೂರ್ತಿ ಚಲಿಸುತ್ತಿದ್ದ ಕಾರಿಗೆ ಗುಂಡು ತಗುಲಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.