ಸಮಗ್ರ ನ್ಯೂಸ್: ಬಿಎಸ್‌ಪಿ ನಾಯಕ ರಾಜ್‌ಪಾಲ್ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅತೀಕ್ ಅಹ್ಮದ್‌ನ ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನ ಯುಪಿ ಪೊಲೀಸರು ಅಲ್ಲಿನ ಝಾನ್ಸಿಯಲ್ಲಿ ಎನ್‌ಕೌಂಟರ್ ಮಾಡಿದ್ದಾರೆ.
ಅಸಾದ್ ಅಹ್ಮದ್ ಹಾಗೂ ಗುಲಾಮ್ ಅನ್ನೊ ಆರೋಪಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಒಟ್ಟು 4 ಆರೋಪಿಗಳನ್ನ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದಂತಾಗಿದೆ. ಇತ್ತ ಇದೇ ಪ್ರಕರಣದಲ್ಲಿ ಅತೀಕ್ ಅಹ್ಮದ್‌ನನ್ನ ಪ್ರಯಾಗ್‌ರಾಜ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅತೀಕ್ ಅಹ್ಮದ್‌ಗೆ 14 ದಿನಗಳ ನ್ಯಾಯಂಗ ಬಂಧನ ನೀಡಿ ಆದೇಶ ಹೊರಡಿಸಿದೆ. ಇನ್ನು ಅತೀಕ್ ಕೋರ್ಟ್‌ನಲ್ಲಿದ್ದಾಗಲೇ ಮಗನ ಎನ್‌ಕೌಂಟರ್ ಸುದ್ದಿ ತಿಳಿದುಬಂದಿದೆ ಎನ್ನಲಾಗಿದೆ.