ಸಮಗ್ರ ನ್ಯೂಸ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇಂದು ಏಪ್ರಿಲ್ 14 ರ ಶುಕ್ರವಾರದಂದು ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾರ್ಯಕ್ರಮಕ್ಕೆ ಏಕೈಕ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗುವುದು ಎಂದು ಪಿಟಿಐ ವರದಿ ಮಾಡಿದೆ.