Ad Widget .

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು

ಸಮಗ್ರ ನ್ಯೂಸ್: ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ಅವರಿದ್ದ ವಾಹನ ತಡರಾತ್ರಿ ಅಪಘಾತಕ್ಕೀಡಾಗಿದೆ.
ಯಾದಗಿರಿಯಿಂದ ಬರುವಾಗ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ.

Ad Widget . Ad Widget .

ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ವಾಹನವೂ ಉರುಳಿದೆ. ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್​ ಅವರನ್ನು ದಾಖಲಿಸಲಾಗಿದೆ.

Ad Widget . Ad Widget .

ಬಾಬುರಾವ್ ಚಿಂಚನಸೂರ್ ಅವರು ಇಂದು ನಾಮಪತ್ರ ಸಲ್ಲಿಸಬೇಕಿತ್ತು. ಅದಕ್ಕಾಗಿ ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದರು. ಸರಳವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ರಸ್ತೆ ಅಪಘಾತದಲ್ಲಿ ಗಾಯವಾದ ಹಿನ್ನಲೆ ನಾಮಪತ್ರ ಸಲ್ಲಿಕೆ ಸದ್ಯಕ್ಕೆ ಮೂಂದೂಡಿಕೆ ಮಾಡಲಾಗಿದೆ

Leave a Comment

Your email address will not be published. Required fields are marked *