Samagra news: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಶ್ರೀಕಂಠೇಶ್ವರನ ದೇವಸ್ಥಾನದ ಹದಿನಾರು ಕಾಲು ಮಂಟಪದ ಬಳಿಯಿಂದ ಚಾಮರಾಜನಗರಕ್ಕೆ ತೆರಳುವ ರಸ್ತೆ ಬದಿಯ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆಯಾಗಿದ್ದ ಬಲಗೈ ಮೇಲೆ “ಭ” ಎಂಬ ಕನ್ನಡ ಅಕ್ಷರ ಟ್ಯಾಟೂ ಕಂಡುಬಂದಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು , ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ದುಷ್ಕರ್ಮಿಗಳು ಇಲ್ಲಿಗೆ ತಂದು ಹಾಕಿರಬಹುದೆಂದು ಹೇಳಲಾಗಿದೆ.
ಮೃತಳ ಮಾಹಿತಿಗಾಗಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರು ಯತ್ನಿಸುತ್ತಿದ್ದಾರೆ. ಮೃತಳ ಬಗ್ಗೆ ಮಾಹಿತಿ ಇದ್ದಲ್ಲಿ ನಂಜನಗೂಡು ಟೌನ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.