ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್| ಹು. ಧಾ‌ರವಾಡ ಸೆಂಟ್ರಲ್ ನಿಂದ ಸ್ಪರ್ಧೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.

Ad Widget ... ..

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ಪಡೆದಿದ್ದಾರೆ.

Ad Widget

ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು.

Leave a Comment

Your email address will not be published. Required fields are marked *