ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲೇಟು| ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದು‌ ಬೆಳ್ತಂಗಡಿ ‌ಉದ್ವಿಗ್ನವಾಗಿದೆ.

Ad Widget ... ..

ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ಮರಳುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು.

Ad Widget

ಈ ವೇಳೆ ಕಾಂಗ್ರೆಸ್ ಪುಂಡನೊಬ್ಬ ಬಿಜೆಪಿ ಕಾರ್ಯಕರ್ತನ ಕಾರಿಗೆ ಬಾಟಲ್ ಮತ್ತು ಕಲ್ಲು ಎಸೆದಿದ್ದು ಇದರ ಪರಿಣಾಮ ಕಾರಿನ ಗ್ಲಾಸ್ ಪುದಿಪುಡಿಯಾಗಿದೆ. ಸ್ಥಳದಲ್ಲಿ ಉಧ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

Leave a Comment

Your email address will not be published. Required fields are marked *