Ad Widget .

ಉದುರುತ್ತಿರುವ ಕಮಲದ ಒಂದೊಂದೇ ದಳಗಳು| ಬಿಜೆಪಿಗೆ ಹಾಗೂ ಎಂಎಲ್ ಸಿ‌ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆಯ ವಿರುದ್ಧ ಬಿಜೆಪಿಯೊಳಗೆ ಭಾರೀ ಅಸಮಾಧಾನ ಮೂಡಿದ್ದು, ದಿನಕ್ಕೊಂದು ವಿಕೆಟ್ ಪತನವಾಗುತ್ತಿದೆ. ಟಿಕೆಟ್​ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಆಯನೂರು ಮಂಜುನಾಥ್​ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್​ ಸಿಗುವುದು ಖಚಿತ ಇಲ್ಲದ ಕಾರಣ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಶಿವಮೊಗ್ಗದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.

Ad Widget . Ad Widget .

ಶಿಮಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *