ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ 5ನೇ ಪಟ್ಟಿಯಲ್ಲೂ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
5ನೇ ಪಟ್ಟಿಯಲ್ಲಿ ಬೆಂಗಳೂರು ನಗರದ ಕೆ.ಆರ್ ಪುರಂ, ಪುಲಕೇಶಿ ನಗರ, ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ, ಮಂಗಳೂರು ಉತ್ತರ ಕ್ಷೇತ್ರ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಬಾಕಿಯುಳಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಬಸವರಾಜು ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆಯಾಗಿದೆ. ನಿನ್ನೆ ಮೊಹಮ್ಮದ್ ಯೂಸೂಫ್ ಸವಣೂರು ಅವರಿಗೆ ಶಿಗ್ಗಾಂವಿ ಟಿಕೆಟ್ ನೀಡಿದ್ದ ಕಾಂಗ್ರೆಸ್ ಇಂದು ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದು, ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.