ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಿಸಿಯ ನಡುವೆ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಮಹತ್ತರ ಘಟ್ಟ ಪಿಯುಸಿ ಫಲಿತಾಂಶ ಇವತ್ತು ಪ್ರಕಟ ಆಗುತ್ತಿದೆ. 11 ಗಂಟೆಗೆ ವೆಬ್ಸೈಟ್ನ ಪರದೆ ಮೇಲೆ ಭವಿಷ್ಯ ಕಾಣಲಿದೆ.
ಪರೀಕ್ಷೆ ಬರೆದ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಬೆಳಗ್ಗೆ 11 ಗಂಟೆಗೆ ವೆಬ್ಸೈಟ್ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿ ಕರೆದಿದೆ. ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸಚಿವರ ಬದಲು ಅಧಿಕಾರಿಗಳೇ ಫಲಿತಾಂಶ ಘೋಷಿಸಲಿದ್ದಾರೆ. ಆ ಬಳಿಕ ಬೆಳಗ್ಗೆ 11 ಗಂಟೆಗೆ ವೆಬ್ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲಿದ್ದು, ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಆಗಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 09 ರಿಂದ 29 ರವರೆಗೆ ನಡೆಸಲಾಗಿತ್ತು.ಇದೀಗ ನಾಳೆ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.