ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ಹಿಡಿದಿದೆ.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಕಾರಣ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ರಾಜ್ಯ ಶಿಕ್ಷಣ ಇಲಾಖೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪ್ರಥಮ ಪಿಯು ಮತ್ತು ಎಸ್ ಎಸ್ ಎಲ್ ಸಿ ಅಂಕಗಳ ಆಧಾರದಲ್ಲಿ ಪಾಸ್ ಮಾಡುವುದಾಗಿ ನಿರ್ಧಾರ ಕೈಗೊಂಡಿತ್ತು. ಆದರೂ ಕಳೆದ ಬಾರಿ ಫೇಲ್ ಆಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಇದನ್ನು ಪ್ರಶ್ನಿಸಿ ರಿಪೀಟರ್ಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈದೀಗ ಕಳೆದ ಬಾರಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಉಚ್ಚನ್ಯಾಯಾಲಯ, ಸರ್ಕಾರದ ನಿರ್ಧಾರಕ್ಕೆ ತಾತ್ಕಾಲಿಕ ತಡೆ ಹಿಡಿದಿದೆ. ಪುನರವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಮಾಡುವುದಾದರೆ ಎಲ್ಲರಿಗೂ ಮಾಡಿ. ಇಂತಹ ಸಮಯದಲ್ಲಿ ನಮಗೆ ಮಾತ್ರ ಯಾಕೆ ಪರೀಕ್ಷೆ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದರು.