ಮೇ ೩ ರಂದು ಮುಲ್ಕಿಗೆ ಮೋದಿ…..!!

ಸಮಗ್ರ ನ್ಯೂಸ್ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮೇ.೩ರಂದು ಆಗಮಿಸಲಿದ್ದಾರೆ.

Ad Widget ... ..

ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ ೬ ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

Ad Widget

Leave a Comment

Your email address will not be published. Required fields are marked *