ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ| ಎರಡು ದಿನ ಶೋಕಾಚರಣೆ

ಸಮಗ್ರ ನ್ಯೂಸ್: ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

Ad Widget ... ..

ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ.

Ad Widget

ಅವರ ಗೌರವಾರ್ಥವಾಗಿ ಗೃಹ ವ್ಯವಹಾರಗಳ ಸಚಿವಾಲಯವು ಏಪ್ರಿಲ್ 26 ಮತ್ತು 27 ರಂದು ಭಾರತದಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ವೇಳೆ ರಾಷ್ಟ್ರ ಧ್ವಜ ಅರ್ಧ ಮಟ್ಟದಲ್ಲಿ ಹಾರಾಡಲಿದ್ದು, ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ಸೂಚಕವಾಗಿ ಎರಡು ದಿನಗಳ ರಾಜ್ಯ ಶೋಕಾಚರಣೆಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

Leave a Comment

Your email address will not be published. Required fields are marked *