Ad Widget .

ಬೆಳ್ತಂಗಡಿ: ತಾ.ಪಂ‌ ಕಟ್ಟಡದಲ್ಲಿ ಆತ್ಮಹತ್ಯೆಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ತಾಲೂಕು ಪಂಚಾಯತ್ ಕ್ಚಾಟ್ರಸ್ ನಲ್ಲಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

Ad Widget . Ad Widget .

ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15) ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Ad Widget . Ad Widget .

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹೊಸ ಎಲೆನಾಡು ಗ್ರಾಮದ ನಿವಾಸಿ ರಮೇಶ್ ಮತ್ತು ಭಾಗ್ಯಮ್ಮ ದಂಪತಿಗಳ ಮೂವರು ಮಕ್ಕಳಲ್ಲಿ ಎರಡನೇ ಮಗನಾದ ಶಿವಪ್ರಸಾದ್ (15) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಶಿವಪ್ರಸಾದ್ ಚಿತ್ರದುರ್ಗದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ರಜೆ ಇರುವುದರಿಂದ ದೊಡ್ಡಮ್ಮ ಮಂಜುಳಾ ಅವರ ಬೆಳ್ತಂಗಡಿ ವಸತಿಗೃಹಕ್ಕೆ ಬಂದಿದ್ದು .ಘಟನೆ ವೇಳೆ ಮಂಜುಳಾ ಕೆಲಸಕ್ಕೆ ಹೋಗಿದ್ದು ,ಮಗಳು ಅಮೃತ ಕಾಲೇಜಿಗೆ ಹೋಗಿದ್ದಳು, ಮಗ ವಿರೇಂದ್ರ ಕೂಡ ಕೆಲಸಕ್ಕೆ ಹೋಗಿದ್ದರು.

ಮಧ್ಯಾಹ್ನ ಮಂಜುಳಾ ಕೆಲಸದಿಂದ ವಸತಿಗೃಹಕ್ಕೆ ಬಂದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು. ಚಿತ್ರದುರ್ಗದಲ್ಲಿರುವ ಮನೆಯವರಿಗೆ ಮಾಹಿತಿ ನೀಡಲಾಗಿದ್ದು. ಘಟನಾ ಸ್ಥಳಕ್ಕೆ ಮನೆಯವರು ಬರುವಿಕೆಗಾಗಿ ಪೊಲೀಸರು ಬಾಲಕ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯನ್ನು ಭದ್ರವಾಗಿ ಬೀಗಹಾಕಿ ಇಟ್ಟಿದ್ದಾರೆ.

Leave a Comment

Your email address will not be published. Required fields are marked *