ಸಮಗ್ರ ನ್ಯೂಸ್: ಮುಂದಿನ 5 ದಿನಗಳಲ್ಲಿ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ಒಳನಾಡು ಭಾಗಗಳು ಮತ್ತು ಪುದುಚೇರಿಗಳಲ್ಲಿ ಮಿಂಚು ಮತ್ತು ಬಿರುಗಾಳಿ (40-50 ಕಿಮೀ) ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ದಾವಣಗೆರೆ ಜಿಲ್ಲೆಯಲ್ಲಿ ಏಪ್ರಿಲ್ 30 ರಿಂದ 3 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ 2ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.