ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ರಾಯಚೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ಕೆಂಭಾವಿ, ಇಳಕಲ್, ಶೋರಾಪುರ, ಸಂತೆಬೆನ್ನೂರು, ಕಾಟಿಕೆರೆ, ಯುಗಟಿ, ಕುರ್ಡಿ, ಮಾನ್ವಿ, ಗಬ್ಬೂರು, ಮಂಠಾಳ, ಕವಡಿಮಟ್ಟಿ, ಶಹಾಪುರ, ಜೇವರ್ಗಿ, ದೇವರಹಿಪ್ಪರಗಿ, ನಾಯಕನಹಟ್ಟಿ, ಮುದಗಲ್, ದೇವದುರ್ಗ, ತಾವರಗೆರೆ, ಯಲಬುರ್ಗಾ, ನಾಲ್ವತವಾಡ, ನಿಟ್ಟೂರು, ಕಕ್ಕೇರಿ, ಯದ್ರಾಮಿ, ಭಾಗಮಂಡಲ, ಶೃಂಗೇರಿ, ಕೊಪ್ಪ, ತರೀಕೆರೆ, ಅಜ್ಜಂಪುರ, ಎನ್ಆರ್ಪುರ, ಹೊಸ ಪೇಟೆ, ಶಿವಮೊಗ್ಗ, ಚನ್ನಗಿರಿ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಬೇಸಿಗೆಯಲ್ಲಿ ತಾಪಮಾನ ಹೆಚ್ಚಳ ವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಮಳೆಯ ವಾತಾವರಣ ಸೃಷ್ಟಿಯಾಗುತ್ತಿದೆ. ಎಲ್ಲೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ವಿರಳ. ಆದರೆ, ಚದುರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಂಭವಿದೆ. ಒಂದೆರಡು ಕಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸುವಂತಾಗಿದೆ.