ಸಮಗ್ರ ನ್ಯೂಸ್: ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಇದೇ ಮೇ 9 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ.
ಭಾರತದಲ್ಲಿ ಪೋಕೋ ಸಂಸ್ಥೆಯ ಸ್ಮಾರ್ಟ್ ಪೋನ್ ಗಳು ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್ ಫೋನ್ ಅನಾವರಣ ಮಾಡಲು ಕಂಪನಿ ಮುಂದಾಗಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ. ಪೋಕೋ ಸಂಸ್ಥೆ ಈ ಫೋನಿನ ಫೀಚರ್ಸ್ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಕೆಲ ವಿಚಾರಗಳು ಸೋರಿಕೆಯಾಗಿದೆ.
ಇದೀಗ ಸಿಕ್ಕ ಮಾಹಿತಿಯ ಪ್ರಕಾರ, ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ಫೋನ್ 3200*1400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮುಲೋಡ್ ಡಿಸ್ಪ್ಲೇಯನ್ನು ಹೊಂದಿರಲಿದೆ. 120 ಅಡಾಪ್ಟಿವ್ ರಿಫ್ರೆಶ್ ರೇಟ್, HDR10+ ಬೆಂಬಲ ಪಡೆದಿರುವ ಸಾಧ್ಯತೆ ಇದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 8+Gen 1 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 13ನಲ್ಲಿ ರನ್ ಆಗಲಿದೆ ಎನ್ನಲಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬಂದರೆ ಈ ಸ್ಮಾರ್ಟ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಫಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಅತ್ಯುತ್ತಮ ಫೋಟೋ ಸೆರೆಹಿಡಿಯುತ್ತದೆ. ಫೋಟೋಗ್ರಫಿಗೆ ಹೇಳಿ ಮಾಡಿಸಿದ ಈ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.
ದೀರ್ಘ ಸಮಯ ಬಾಳಿಕೆ ಬರುವ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 67W ವೇಗದ ಚಾರ್ಜಿಂಗ್ ಬೆಂಬಲ ಕೂಡ ಪಡೆದಿರಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಹಾಟ್ ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್ಫೋನ್ ಜ್ಯಾಕ್ ಇರಲಿದೆ. ಅಂಡರ್ ಡಿಸ್ ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನ್ ಬೆಲೆ ಸದ್ಯದಲ್ಲೇ ಬಹಿರಂಗವಾಗಲಿದೆ. ಮೂಲಗಳ ಪ್ರಕಾರ 25,000 ರೂ. ಇರಬಹುದು ಎಂದು ತಿಳಿದುಬಂದಿದೆ.