ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ
ಜೂನ್ 21 ರಂದು ಕೋವಿಡ್ ಸೆಮಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದ್ದು, ಇದರ ಸಂಬಂಧ ಶುಕ್ರವಾರ ಅಥವಾ ಶನಿವಾರದ ಹೊತ್ತಿಗೆ ಸರ್ಕಾರದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.
ಎರಡನೇ ಹಂತದಲ್ಲಿ ನಿರ್ಬಂಧ ಸಡಿಲಿಕೆ ಮಾಡುವ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಅನ್ ಲಾಕ್ 2.0 ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ಬರುತ್ತದೆ. ಜೂನ್ 21 ರಿಂದ ರಾಜ್ಯದಲ್ಲಿ ಹೋಟೆಲ್, ಮಾರುಕಟ್ಟೆ, ಹೇರ್ ಕಟ್ ಶಾಪ್, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು ಎಂದು ತಿಳಿದುಬಂದಿದೆ. ಜೂನ್ 21 ರಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರ ಆರಂಭಕ್ಕೆ ನಿರ್ಧರಿಸಲಾಗಿದೆ ಎನ್ನಲಾಗಿದೆ. ಶಾಪಿಂಗ್ ಕಾಂಪ್ಲೆಕ್ಸ್ ಓಪನ್ ಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದ್ದು, ಚಿತ್ರಮಂದಿರಗಳು, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಯಥಾಸ್ಥಿತಿ ಬಂದ್ ಇರಲಿವೆ ಎಂದು ಹೇಳಲಾಗುತ್ತಿದೆ.