Ad Widget .

Weather Report:ಚಂಡಮಾರುತ; ವಾಯುಭಾರ ಕುಸಿತ| ಮೇ.6ರಿಂದ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಒಂದೂವರೆ ತಿಂಗಳಿಂದ ಸೂರ್ಯನ ತಾಪಮಾನ ಹೆಚ್ಚಳದಿಂದ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬಸವಳಿದಿದ್ದಾರೆ. ಹೀಗಾಗಿ ಜನರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.

Ad Widget . Ad Widget . Ad Widget .

ಇನ್ನು ಈ ಸಮಯದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವುದರಿಂದ ಮಳೆಯಿಂದ ತೊಂದರೆ ಆಗಬಹುದು ಎನ್ನುವ ಆತಂಕದಲ್ಲಿ ಜನರಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 6 ವೇಳೆಗೆ ಬಂಗಾಳಕೊಲ್ಲಿಯಲ್ಲಿ ಹಲವು ಬದಲಾವಣೆಗಳಾಗಲಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದಿಂದ ಮಳೆ ಹೆಚ್ಚಾದಲ್ಲಿ ರಾಜ್ಯದಲ್ಲಿ ಚುನಾವಣೆ ಪ್ರಚಾರ, ಮತದಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *