ಸಮಗ್ರ ನ್ಯೂಸ್: 2016ರ ಒಲಿಂಪಿಕ್ಸ್ ಕ್ರೀಡೆಯಲ್ಲಿ ಮೂರು ಪದಕ ಹಾಗೂ ಎರಡು ಬಾರಿ ವಿಶ್ವಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ ಟೋರಿ ಬೋವಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಹಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ತೆರಳಿದ್ದ ಬೋವಿ ಫ್ಲೋರಿಡಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೂ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತನಿಖೆ ನಡೆಸಲು ಹಿಂದೇಟು ಹಾಕಿದೆ ಎಂಬ ಆರೋಪಗಳು ಕೇಳಿಬಂದಿದೆ.
ಟೋರಿ 2016ರ ಒಲಿಂಪಿಕ್ಸ್‌ನಲ್ಲಿ ಮೂರು ಪದಗಳನ್ನು ಗೆದ್ದುಕೊಂಡಿದ್ದರು. ಕೊನೆಯದ್ದಾಗಿ 2022ರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇದೀಗ ಬೋವಿಯ ಅನುಮಾನಾಸ್ಪದ ಸಾವು ಕ್ರಿಡಾ ಅಭಿಮಾನಿಗಳಿಗೆ ಸಾಕಷ್ಟು ಅಘಾತ ನೀಡಿದೆ.






