ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದರು.
ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.