ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮೇ7 ರಂದು ಉಡುಪಿ ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿಯ ತಿರ್ಲಪಲ್ಕೆಯಲ್ಲಿ ಸಂಭವಿಸಿದೆ.

Ad Widget ... ..

ಬೆಳ್ಳೆ ಗ್ರಾಮ ಪಂಚಾಯತ್ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ವಿಷಯ ತಿಳಿದ ತಕ್ಷಣ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿಯವರಿಗೆ ಮಾಹಿತಿ ನೀಡಿದ್ದಾರೆ. ಕೊಳದ ಪಕ್ಕದಲ್ಲಿ ಮೃತ ದೇಹ ಪತ್ತೆಯಾಗಿದ್ದು, ಮಗುವನ್ನು ಆಕೆಯ ಪೋಷಕರು ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿರಬಹುದು ಎಂಬ ಗುಮಾನಿಗೆ ಕಾರಣವಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *