ಇಂದು(ಮೇ.8) ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಘೋಷಣೆಯ ದಿನಾಂಕ ಹಾಗೂ ಸಮಯದ ಬಗ್ಗೆ ಮಾಹಿತಿಯನ್ನು ಪ್ರಕಟಿಸಿದೆ. ಇಂದು(ಮೇ.8) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಘೋಷಣೆ ಮಾಡಲಿದೆ.

Ad Widget ... ..

karresults.nic.in ಮತ್ತು kseab.karnataka.gov.in ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Ad Widget

2022-23ನೇ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್​ 28ರಿಂದ ಏಪ್ರಿಲ್​ 11ವರೆಗೆ ನಡೆದಿತ್ತು. ವಿದ್ಯಾರ್ಥಿಗಳಿಗೆ ಏಪ್ರಿಲ್​ 17ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.

Leave a Comment

Your email address will not be published. Required fields are marked *