ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ಕೇನ್ಯ ಎಂಬಲ್ಲಿ ನಡೆದಿದೆ.
ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ಸ್ಥಳಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಕಾಣೆಯಾದವರ ಪೈಕಿ ಒರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ ರವರು ತನ್ನ ಅಣ್ಣನ ಮನೆಗೆ ಬಂದಿದ್ದ ವೇಳೆ ಮಕ್ಕಳು ಸ್ನಾನಕ್ಕೆಂದು ನದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.