ಸಮಗ್ರ ನ್ಯೂಸ್: ಕಳೆದೆರಡು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ವರ್ಷ ಗುಡುಗು ಸಿಡಿಲಿನ ಪ್ರಮಾಣವೂ ಹೆಚ್ಚಿದೆ. ಭಾರಿ ಮಳೆ ಹಾಗೂ ಗುಡುಗು ಸಿಡಿಲಿನ ಪ್ರಭಾವದಿಂದ ಅನಾಹುತಗಳು ನಡೆದಿವೆ.
ಮುಂದಿನ 48 ಗಂಟೆಗಳ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಮೇ14ರವರೆಗೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಇಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗಿದ್ದು, ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ʼಮೋಚಾʼ ಚಂಡಮಾರುತ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಎಚ್ಚರಿಸಿದ್ದು, ಮೇ 14ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.