ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಗೆದ್ದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಶನಿವಾರ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದರು.
ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರಿಗೆ ಕನಕಮಜಲು, ಜಾಲ್ಸೂರಿನಲ್ಲಿ ಅದ್ದೂರಿ ಸ್ವಾಗತಿಸಿ, ಅಭಿನಂದಿಸಲಾಯಿತು. ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರು ಸುಳ್ಯ ಬಿಜೆಪಿ ಕಛೇರಿ ಬಳಿಕ ಮಾತನಾಡಿ, ಸುಳ್ಯದ ಅಭಿವೃದ್ಧಿಗೆ ಎಲ್ಲರ ಸಹಕಾರ ಯಾಚಿಸಿ ಗೆಲುವಿಗೆ ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ಬಿಜೆಪಿ ಕಛೇರಿಗೆ ತೆರಳಿದರು.
ಬಿಜೆಪಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವಿನಯ ಕುಮಾರ್ ಕಂದಡ್ಕ, ಸುಬೋದ್ ಶೆಟ್ಟಿ ಮೇನಾಲ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.