ಸಮಗ್ರ ನ್ಯೂಸ್: 2023ನೇ ಸಾಲಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಅದರ ನೈತಿಕ ಹೊಣೆ ಕಟೀಲ್ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ15 ರಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಾಜೀನಾಮೆ ನೀಡುವುದಾಗಿ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು. 2019 ರ ಆಗಸ್ಟ್ 20 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಕಟೀಲ್ ರನ್ನು ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.