ಉಪ್ಪಿನಂಗಡಿ: ರಾಷ್ಟೀಯ ವಿಪತ್ತು ನಿರ್ವಹಣಾ ಪಡೆ ಉಪ್ಪಿನಂಗಡಿಯ ಹಲವು ನೆರೆ ಹಾವಳಿಗೆ ಒಳಗಾಗುವ ಸಂಭವ ಇರುವ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿತು.
ಉಪ್ಪಿನಂಗಡಿ ಪ್ರದೇಶವು ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಳವಾಗಿದೆ. ಇಲ್ಲಿ ಪ್ರತಿ ವರ್ಷ ಪಶ್ಚಿಮ ಘಟ್ಟ ಪ್ರದೇಶ ಗಳಲ್ಲಿ ಮಳೆ ಹೆಚ್ಚಾದಾಗ ನೆರೆ ಹಾವಳಿ ಎದುರಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ವಿಜಯವಾಡ ಇನ್‌ಸ್ಪೆಕ್ಟರ್ ಆರ್.ಪಿ. ಚೌಧರಿ ನೇತೃತ್ವದ ಐದು ಮಂದಿಯ ತಂಡ ಪರಿಶೀಲನೆ ನಡೆಸಿದೆ. ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯ ಸ್ನಾನಘಟ್ಟ, ಹಳೆಗೇಟು, ಪಂಜಳ, ಮಠ, ಬೊಳ್ಳಾರು, ಬಜತ್ತೂರು ಪರಿಸರದಲ್ಲಿ ಸ್ಥಳೀಯ ಕಂದಾಯ ಅಧಿಕಾರಿಗಳೊಂದಿಗೆ ಎನ್ ಡಿ ಆರ್ ಎಫ್ ತಂಡ ಪರಿಶೀಲನೆ ನಡೆಸಿದೆ. ನೆರೆ ಬಾಧಿತ ಪ್ರದೇಶಗಳಲ್ಲಿ ಸಂಭಾವ್ಯ ನೆರೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಗಳ ಬಗ್ಗೆ ಅಧ್ಯಯನ ನಡೆಸಿದೆ. ಕಂದಾಯ ನಿರೀಕ್ಷಕರು, ಉಪ್ಪಿನಂಗಡಿ ಗ್ರಾಮಕರಣಿಕರು, ನೆಕ್ಕಿಲಾಡಿ ಗ್ರಾಮ ಕರಣಿಕರು, ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಅಧಿಕಾರಿಗಳು ಜೊತೆಗಿದ್ದರು.