Ad Widget .

ಪ್ರತ್ಯೇಕ ಅಪಘಾತಕ್ಕೆ 13 ಮಂದಿ ಬಲಿ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶ ಮತ್ತು ಛತ್ತೀಸ್​ಗಢ ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 13 ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಲಾರಿ ಮತ್ತು ತೂಫಾನ್​ ವಾಹನ ಮುಖಾಮುಖಿ ಡಿಕ್ಕಿಯಾಗಿ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಂಡಾಪುರಂ ತಾಲೂಕಿನ ಚಿತ್ರಾವತಿ ಸೇತುವೆ ಬಳಿ ಇಂದು ಘಟನೆ ನಡೆದಿದೆ. ಕಾಕಿನಾಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್​​​ ನಡುವೆ ಡಿಕ್ಕಿಯಾಗಿ ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Ad Widget . Ad Widget . Ad Widget .

ತಾಡಿಪತ್ರಿ ಭಾಗದ ಜನರು ತೂಫಾನ್​ ವಾಹನದಲ್ಲಿ ತಿರುಪತಿ ತಿರುಮಲ ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಅಪಘಾತವಾಗಿದೆ. ತಾಡಪತ್ರಿ ಕಡೆಯಿಂದ ಬಂದ ಲಾರಿ ಅತಿವೇಗದಲ್ಲಿ ಸಂಚರಿಸುತ್ತಿದ್ದ ತೂಫಾನ್​ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡವರನ್ನು ತಾಡಪತ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಒಂದು ಮಗು ಮತ್ತು ಮಹಿಳೆಯರು ಸೇರಿ 6 ಜನರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಲೋದಬಜಾರ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಸಂಭವಿಸಿದ ಅಪಘಾತದಲ್ಲಿ ಪಿಕಪ್​ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆಯಿತು. ಭಾನುವಾರ ರಾತ್ರಿ 10:30ಕ್ಕೆ ಪಲಾರಿಯಿಂದ 6 ಕಿ.ಮೀ ದೂರದಲ್ಲಿರುವ ಗೊಂಡ ಪುಲಿಯಾ ಗ್ರಾಮದ ಬಳಿ ಅಪಘಾತ ನಡೆದಿದೆ.

12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *