ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ವಯನಾಡ್: ಸ್ವ ಪಕ್ಷಕ್ಕೆ ಸೇರಿಸಿಕೊಳ್ಳಲು ಬೇರೊಂದು ಪಕ್ಷದ ನಾಯಕಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಕೇರಳ ಬಿಜೆಪಿ ರಾಜ್ಯಧ್ಯಕ್ಷ ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

Ad Widget ... ..

ಕಳೆದ ಕೇರಳ ವಿಧಾನಸಭಾ ಚುನಾವಣೆಯಿಂದ ಮೊದಲು ಜೆ ಆರ್ ಎಸ್ ಪಕ್ಷದ ನಾಯಕಿ ಸಿಕೆ ಜಾನು ಎಂಬವರಿಗೆ ಸುರೇಂದ್ರನ್ 10 ಲಕ್ಷ ರೂ ಲಂಚ ನೀಡಿದ್ದರು ಎನ್ನಲಾಗಿದೆ.

Ad Widget

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ ಪಿ.ಕೆ ನವಾಸ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ವಯನಾಡ್‌‌ ಕಲ್ಪೆಟ್ಟಾದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ಆದೇಶ ನೀಡಿದೆ. ಸುರೇಂದ್ರನ್ ಮತ್ತು 10 ಕೋಟಿ ಬೇಡಿಕೆಯಿಟ್ಟು, 10 ಲಕ್ಷ ಲಂಚ ಪಡೆದ ಸಿಕೆ ಜಾನು ಮೇಲೆಯೂ ಐಪಿಸಿ ಸೆಕ್ಷನ್ಸ್ 171 ಬಿ (ಮತದಾನಕ್ಕೆ ಲಂಚ ನೀಡಿ ಪ್ರೇರೇಪಿಸುವುದು), ಐ 71 ಇ (ಲಂಚ) ಮತ್ತು 171 ಎಫ್ (ಅನಗತ್ಯ ಪ್ರಭಾವ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ನ್ಯಾಯಾಲಯ ಹೇಳಿದೆ.

ಸುರೇಂದ್ರನ್ ಅವರು ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಕೇರಳ ವಿಧಾನಸಭೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

Leave a Comment

Your email address will not be published. Required fields are marked *