ನಳಿನ್ ಕುಮಾರ್,ಸದಾನಂದ ಗೌಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಆರೋಪಿಗಳಿಗೆ ರಕ್ತ ಒಸರುವಷ್ಟು ಥಳಿಸಿದ ಪೊಲೀಸರು |ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರು

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Ad Widget ... ..

ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 2 ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ರೀತಿಯ ಕಿರುಕುಳ, ಚಿತ್ರಹಿಂಸೆ ಕೊಟ್ಟಿದ್ದಾರೆ. ಅಲ್ಲದೆ ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ಕಿರುಕುಳದಿಂದ ಕಾರ್ಯಕರ್ತರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಅರುಣ್ ಪುತ್ತಿಲ ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ.

Ad Widget

ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಕೂಡಿಹಾಕಿ ತೀವ್ರವಾಗಿ ಥಳಿಸಲಾಗಿದೆ. ನಳಿನ್ ಕುಮಾರ್ ಆಪ್ತರು ಮತ್ತು ಪುತ್ತೂರಿನ ಬಿಜೆಪಿ ಪುಢಾರಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಗೇ ಈ ರೀತಿ ಪೊಲೀಸರ ಮೂಲಕ ಚಿತ್ರಹಿಂಸೆ ಕೊಡಿಸಿದ್ದು ಪುತ್ತೂರಿನಲ್ಲಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನ ಬಿಜೆಪಿ ಪುಢಾರಿಗಳ ವಿರುದ್ಧ ಕಾರ್ಯಕರ್ತರ ಒಳಗಿನಿಂದಲೇ ಆಕ್ರೋಶದ ಕಟ್ಟೆಯೊಡೆದಿದೆ.

Leave a Comment

Your email address will not be published. Required fields are marked *