ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ ₹. 2000 ನೋಟು ವಿನಿಮಯ ಅವಕಾಶ

ಸಮಗ್ರ ನ್ಯೂಸ್: ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸಲಾಗುತ್ತಿದೆ. ಕೌಂಟರ್ನಲ್ಲಿ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹೇಳಿದೆ.

Ad Widget ... ..

ಮೇ.23ರ ಮಂಗಳವಾರದ ಇಂದಿನಿಂದ ಹಿಂಪಡೆಯಲಾದಂತ 2,000 ರೂಪಾಯಿ ಮುಖಬಲೆಯ ನೋಟುಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ ಮುಖ ಬೆಲೆಯ ನೋಟುಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ.

Ad Widget

2000 ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವುದನ್ನು ನಿಲ್ಲಿಸುವಂತೆ ಕೇಂದ್ರ ಬ್ಯಾಂಕ್ ಶುಕ್ರವಾರ ಎಲ್ಲಾ ಬ್ಯಾಂಕುಗಳಿಗೆ ಸಲಹೆ ನೀಡಿದೆ. ಆದಾಗ್ಯೂ, 2000 ರೂ ಮುಖಬೆಲೆಯ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ.

Leave a Comment

Your email address will not be published. Required fields are marked *