Ad Widget .

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.

Ad Widget . Ad Widget . Ad Widget .

‘ಗರೀಬಿ ಹಟಾವೋ’ ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾಂಟೀನ್ ಗೆ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ. ಉಪಹಾರ ದರ 5 ರಿಂದ 10 ರೂ.ಗೆ ಏರಿಕೆ ಮಾಡಲಾಗುತ್ತದೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ ಹಿನ್ನೆಲೆಯಲ್ಲಿ ಅದು ಹಾಗೆಯೇ ಮುಂದುವರೆಯುತ್ತದೆ. ಹಣ ಪಾವತಿ ಆಗಿಲ್ಲ ಅನ್ನೋ ದೂರು ಕೇಳಿಬಂದಿದೆ. ಮಾರ್ಷಲ್ ನೀಡುವ ವರದಿ ಆಧಾರದಲ್ಲಿ ಹಣ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ ಟೆಂಡರ್, ಗುತ್ತಿಗೆದಾರರಿಗೆ ಹಳೇ ಪೇಮೆಂಟ್ ಆಗಲಿದೆ ಎಂದರು.

Leave a Comment

Your email address will not be published. Required fields are marked *